ಪ್ರಕಟನೆ 21:11 - ಪರಿಶುದ್ದ ಬೈಬಲ್11 ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆ ದೆವಾಚ್ಯಾ ವೈಭವಾನ್ ಹೊಳ್ವಳುಲಾಗಲ್ಲೆ, ತೆ ಶಾರ್ ಲೈ ಕಿಮ್ತಿಚ್ಯಾ ಪೊಡ್ಯಾಂಚೆ ಸರ್ಕೆ ಝಳ್-ಝಳ್ತಲ್ಯಾ ವಜ್ರಾಚ್ಯಾ ಸರ್ಕೆ ಹೊಳ್ವಳುಲಾಗಲ್ಲೆ. ಅಧ್ಯಾಯವನ್ನು ನೋಡಿ |
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.