Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:15 - ಪರಿಶುದ್ದ ಬೈಬಲ್‌

15 ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಸಂಗಡ ಮಾತಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಪ್ರಾಕಾರವನ್ನೂ ಅಳತೆ ಮಾಡುವದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೇಕೋಲನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾಜ್ಯಾ ಕ್ಡೆ ಬೊಲಲ್ಲ್ಯಾ ದೆವ್‍ದುತಾಕ್ಡೆ ಶಾರ್, ತೆಚಿ ದಾರಾ, ಅನಿ ಭಿತ್ತ್ ಅಳ್ತಿ ಕರುನ್ ಬಗುಕ್ ಸೊನ್ಯಾಚಿ ಎಕ್ ಅಳ್ತಿ ಕರ್ತಲಿ ಖಾಟಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:15
10 ತಿಳಿವುಗಳ ಹೋಲಿಕೆ  

ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.


ಯೆಹೋವನು ನನ್ನನ್ನು ಅಲ್ಲಿಗೆ ಕರೆತಂದನು. ಅಲ್ಲಿ ಒಬ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆಯ ಕೋಲೂ ಇದ್ದವು. ಅವನು ದ್ವಾರದ ಬಳಿಯಲ್ಲಿ ನಿಂತಿದ್ದನು.


“ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು. “ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು.


ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.


ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.


ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.


ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು