ಪ್ರಕಟನೆ 21:2 - ಪರಿಶುದ್ದ ಬೈಬಲ್2 ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಪವಿತ್ರ್ ಶಾರ್ ನ್ಹವೆ ಜೆರುಜಲೆಮ್ ಎಕ್ ನ್ಹವ್ರಿ ನ್ಹವ್ರ್ಯಾಕ್ ಭೆಟುಕ್ ತಯಾರ್ ಹೊಲ್ಯಾ ಸರ್ಕೆ ಬರೆ ಕರುನ್ ನೆಸುನ್ ತಯಾರ್ ಹೊಲ್ಯಾ ಸರ್ಕೆ ತಯಾರ್ ಹೊವ್ನ್ ಸರ್‍ಗಾ ವೈನಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಲೆ ಮಿಯಾ ಬಗಟ್ಲೊ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.