Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:23 - ಪರಿಶುದ್ದ ಬೈಬಲ್‌

23 ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಶಾರಾಕ್ ಉಜ್ವೊಡ್ ದಿವ್ಕ್ ದಿಸ್ ನಾಹೊಲ್ಯಾರ್ ಚಂದ್ರಾಮ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಮಹಿಮಾಚ್ ತ್ಯಾ ಶಾರಾ ವರ್ತಿ ಫಾಕಲ್ಲಿ ರ್‍ಹಾತಾ, ಅನಿ ಬೊಕ್ಡುಚ್ ತ್ಯಾ ಶಾರಾಚೊ ದಿವೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:23
25 ತಿಳಿವುಗಳ ಹೋಲಿಕೆ  

ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಈ ದೇವದೂತನಿಗೆ ಮಹಾ ಅಧಿಕಾರವಿತ್ತು. ಈ ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು