Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:27 - ಪರಿಶುದ್ದ ಬೈಬಲ್‌

27 ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಪವಿತ್ರ್ ನಸಲ್ಲೆ ಕಾಯ್ಬಿ, ನಾಹೊಲ್ಯಾರ್ ಅಬ್ರುಗೆಡಿ ಕಾಮಾ ಕರಲ್ಲೆ ಹೊಂವ್ದಿತ್, ಝುಟೆ ಬೊಲ್ತಲೆ ಹೊಂವ್ದಿತ್, ಶಾರಾತ್ ಭುತ್ತುರ್ ಗುಸಿನ್ಯಾತ್. ಖಾಲಿ ಬೊಕ್ಡಾಚ್ಯಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಕೊನಾಚಿ ನಾವಾ ಲಿವಲ್ಲಿ ಹಾತ್, ತೆನಿ ಎವ್ಡೆಚ್ ಶಾರಾತ್ ಭುತ್ತುರ್ ಗುಸ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:27
28 ತಿಳಿವುಗಳ ಹೋಲಿಕೆ  

ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ


“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.


ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳವರೆಗೆ ಪಾಳೆಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ತನಕ ಇಸ್ರೇಲರು ಪ್ರಯಾಣ ಮಾಡಲಿಲ್ಲ.


ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು