ಪ್ರಕಟನೆ 21:3 - ಪರಿಶುದ್ದ ಬೈಬಲ್3 ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಸಿವಾಸನಾ ವೈನಾ ಎಕ್ ಮೊಟೊ ಧನ್ ಬೊಲ್ತಲೆ ಮಿಯಾ ಆಯಿಕ್ಲೊ; “ಅತ್ತಾ ದೆವಾಚೆ ಘರ್ ಲೊಕಾಂಚ್ಯಾ ವಾಂಗ್ಡಾ ಹಾಯ್! ತೊ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆನಿ ತೆಚಿ ಲೊಕಾ ಹೊತ್ಯಾತ್ ಖುದ್ ದೆವುಚ್ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೊ ತೆಂಚೊ ದೆವ್ ಹೊತಾ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.