Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:13 - ಪರಿಶುದ್ದ ಬೈಬಲ್‌

13 ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನೇ ಆದಿಯೂ ಅಂತವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಆರಂಬ್ ಅನಿ ಅಂತ್ ಮಿಯಾಚ್”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:13
10 ತಿಳಿವುಗಳ ಹೋಲಿಕೆ  

ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು