Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:15 - ಪರಿಶುದ್ದ ಬೈಬಲ್‌

15 ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಶಾರಾಚ್ಯಾ ಭಾಯ್ರ್ ಲೊಕಾಕ್ನಿ ವಾಟ್ ಚುಕ್ವುತಲಿ ಕುತ್ರಿ ಸಾರ್ಕಿ ಲೊಕಾ ಹಾತ್, ತೆನಿ ನಸ್ತೆ ಕರ್‍ತ್ಯಾತ್ , ಅನಿ ಜಿವ್ ಕಾಡ್ತಾತ್, ಮುರ್ತಿಯಾಂಚಿ ಪುಜಾ ಕರ್ತಾತ್, ಅನಿ ಅಪ್ನಾಚ್ಯಾ ಕಾಮಾನಿ ಅನಿ ಬೊಲ್ನ್ಯಾನಿ ಅನಿ ಕರ್ನ್ಯಾನಿ ಝುಟೆ ಕರುನ್ ದಾಕ್ವುತಲ್ಯಾಚೊ ಪ್ರೆಮ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:15
29 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಇವು ದೇವರನ್ನು ಕೋಪಗೊಳಿಸುತ್ತವೆ.


ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.


ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು