ಪ್ರಕಟನೆ 22:19 - ಪರಿಶುದ್ದ ಬೈಬಲ್19 ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಕೊನ್‍ಬಿ ಹ್ಯಾ ಪುಸ್ತಕಾತ್ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾನಿತ್ಲೆ ಕಾಯ್ಬಿ ಕಾಡ್ಲ್ಯಾನ್ ತರ್, ದೆವ್ ತೆಂಚೊ ಹ್ಯಾ ಪುಸ್ತಕಾತ್ ಸಾಂಗಲ್ಲ್ಯಾ ಪವಿತ್ರ್ ಶಾರಾಚೊ ಅನಿ ಜಿವ್ ದಿತಲ್ಯಾ ಝಾಡಾಚೆ ಫಳ್ ಖಾತಲೊ ಭಾಗ್ ಕಾಡುನ್ ಘೆತಾ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.