5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’
ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.
ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”
“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.
ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.
ಆ ಸಮಯದಲ್ಲಿ ಚಂದ್ರನ ಪ್ರಕಾಶವು ಸೂರ್ಯನಂತಿರುವದು. ಸೂರ್ಯನ ಪ್ರಕಾಶವು ಈಗ ಇರುವದಕ್ಕಿಂತ ಏಳರಷ್ಟು ಹೆಚ್ಚಾಗಿರುವದು. ಸೂರ್ಯನ ಒಂದು ದಿವಸದ ಬೆಳಕು ಒಂದು ವಾರದ ಬೆಳಕಿನಷ್ಟಿರುವದು. ಯೆಹೋವನು ತನ್ನ ಮುರಿದುಹೋದ ಜನರಿಗೆ ಆದ ಗಾಯದ ಪೆಟ್ಟುಗಳನ್ನು ಗುಣಪಡಿಸುವಾಗ ಇವೆಲ್ಲಾ ಸಂಭವಿಸುತ್ತವೆ.
ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.