ಪ್ರಕಟನೆ 22:6 - ಪರಿಶುದ್ದ ಬೈಬಲ್6 ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ದೆವಾಚ್ಯಾ ದುತಾನ್ ಮಾಕಾ,“ಹ್ಯಾ ಗೊಸ್ಟಿಯಾ ಖರ್‍ಯಾ ಅನಿ ಬರೊಸೊ ಕರುಕ್ ಯೊಗ್ಯ್ ಹಾತ್. ಸರ್ವೆಸ್ವರ್ ದೆವಾನ್ ಪ್ರವಾದ್ಯಾಕ್ನಿ ಪವಿತ್ರ್ ಆತ್ಮೊ ದಿಲ್ಲ್ಯಾನ್, ಅಪ್ನಾಚ್ಯಾ ಸೆವಕಾಕ್ನಿ ಲಗ್ಗುನಾಚ್ ಕಾಯ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಅಪ್ನಾಚ್ಯಾ ದೆವ್‍ದುತಾಕ್ ಧಾಡುನ್ ದಿಲ್ಯಾನಾಯ್.” ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.