Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:1 - ಪರಿಶುದ್ದ ಬೈಬಲ್‌

1 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾರ್ದಿಸಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೆವಾಚೆ ಸಾತ್ ಆತ್ಮೆ ಅನಿ ಸಾತ್ ಚಿಕ್ಕಿಯಾ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ತಿಯಾ ಕಾಯ್ ಕರುಲೆಯ್ ಮನುನ್ ಮಾಕಾ ಗೊತ್ತ್ ಹಾಯ್. ಝಿತ್ತೊ ರ್‍ಹಾತಲೊ ಮನುನ್ ತುಕಾ ಲೈ ಮಾನ್ ದಿತ್ಯಾತ್. ಖರೆ ತಿಯಾ ಮರುನ್ ಗೆಲ್ಲೊ ಹಾಸ್ ಮನುನ್‍ಬಿ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:1
30 ತಿಳಿವುಗಳ ಹೋಲಿಕೆ  

ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.


ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.


ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.


“ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು