ಪ್ರಕಟನೆ 3:17 - ಪರಿಶುದ್ದ ಬೈಬಲ್17 ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಿಯಾ ಮಿಯಾ ಸಾವ್ಕಾರ್, ಲೈ ಆಸ್ತಿ ಅಸಲ್ಲೊ; ಮಾಜ್ಯಾಕ್ಡೆ ಮಾಕಾ ಗರಜ್ ಹೊತ್ತೆ ಸಗ್ಳೆ ಹಾಯ್ ಮನ್ತೆಯ್. ಖರೆ ತುಜಿ ಗತ್ ಕಾಯ್, ತಿಯಾ ಕಸ್ಲ್ಯಾ ಪರಿಸ್ತಿತಿತ್ ಪಡ್ಲೆ ಮನುನ್ ತುಕಾ ಗೊತ್ತ್ ನಾ. ತಿಯಾ ಗರಿಬ್, ನಾಗ್ಡೊ ಅನಿ ಕುಡ್ಡೊ ಹೊವ್ನ್ ಹಾಸ್. ಅಧ್ಯಾಯವನ್ನು ನೋಡಿ |
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?