Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:19 - ಪರಿಶುದ್ದ ಬೈಬಲ್‌

19 “ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:19
31 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”


ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.


“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.


ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.


ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.


ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.


ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;


“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.


ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.


ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ.


ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


“ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು