ಪ್ರಕಟನೆ 3:21 - ಪರಿಶುದ್ದ ಬೈಬಲ್21 “ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾ, ತೆಂಕಾ ಕಸೆ ಮಿಯಾ ಜಿಕುನ್ ಜಯ್ ಹೊವ್ನ್ ಯೆವ್ನ್ ಬಾಬಾಚ್ಯಾ ಸಿವಾಸನಾ ವರ್ತಿ ಬಸ್ಲಾ, ತಸೆಚ್ ಮಾಜ್ಯಾ ಬಾಜುಕ್ ಮಾಜ್ಯಾ ಸಿವಾಸನಾಚ್ಯಾ ವರ್ತಿ ಬಸ್ತಲೊ ಹಕ್ಕ್ ಮಿಯಾ ದಿತಾ. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.