Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:3 - ಪರಿಶುದ್ದ ಬೈಬಲ್‌

3 ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:3
24 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ.


ಎಚ್ಚರಿಕೆಯಿಂದಿರಿ! ಯಾವಾಗಲೂ ಸಿದ್ಧರಾಗಿರಿ! ಆ ಸಮಯ ಯಾವಾಗ ಬರುತ್ತದೆಂದು ನಿಮಗೆ ತಿಳಿದಿಲ್ಲ.


ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.


ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.


ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.


ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.


ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.


‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು