ಪ್ರಕಟನೆ 3:4 - ಪರಿಶುದ್ದ ಬೈಬಲ್4 “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖರೆ ಸಾರ್ದಿಸಾತ್ ತುಮ್ಚ್ಯಾ ಮದ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ನಾಚೆ ಕಪ್ಡೆ ಮ್ಹೆಳ್ವಿ ನಸ್ತಾನಾ ಥವ್ನ್ ಘೆಟ್ಲ್ಯಾನಾತ್. ತುಮಿ ಫಾಂಡ್ರೆ ಕಪ್ಡೆ ನೆಸುನ್ ಮಾಜ್ಯಾ ವಾಂಗ್ಡಾ ಚಲ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆಕಾ ಯೊಗ್ಯ್ ಹಾಸಿ. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”