ಪ್ರಕಟನೆ 3:5 - ಪರಿಶುದ್ದ ಬೈಬಲ್5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜೆ ಕೊನ್ ಜಿಕುನ್ ಜಯ್ ಹೊತ್ಯಾತ್ ತೆಂಕಾ ಅಸೆ ಫಾಂಡ್ರೆ ಕಪ್ಡೆ ನೆಸ್ವುನ್ ಹೊತ್ಯಾತ್, ಅನಿ ಮಿಯಾ ಜಿವಾಚ್ಯಾ ಪುಸ್ತಕಾತ್ನಾ ತೆಂಚಿ ನಾವಾ ಪುಸುನ್ ಕಾಡಿನಾ. ಮಾಜ್ಯಾ ಬಾಬಾಚ್ಯಾ ಅನಿ ತ್ಯೆಚ್ಯಾ ದುತಾಂಚ್ಯಾ ಇದ್ರಾಕ್ ತಿ ಮಾಜಿ ಲೊಕಾ ಮನುನ್ ಕಾಯ್ಬಿ ಧಾಪಿನಸ್ತಾನಾ ಮಿಯಾ ಸಾಂಗ್ತಾ. ಅಧ್ಯಾಯವನ್ನು ನೋಡಿ |
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.