Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:8 - ಪರಿಶುದ್ದ ಬೈಬಲ್‌

8 “ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಮುಂದೆ ತೆರೆದ ಬಾಗಿಲನ್ನು ಇಟ್ಟಿದ್ದೇನೆ. ಅದನ್ನು ಯಾರೂ ಮುಚ್ಚಲಾರರು. ನೀನು ದುರ್ಬಲನೆಂಬುದು ನನಗೆ ತಿಳಿದಿದೆ. ಆದರೆ ನೀನು ನನ್ನ ಬೋಧನೆಯನ್ನು ಅನುಸರಿಸಿದೆ. ನನ್ನ ಹೆಸರನ್ನು ಹೇಳಲು ನೀನು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಕೃತ್ಯಗಳನ್ನು ಬಲ್ಲೆನು; ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನಗೆ ಸೇರಿದವನಲ್ಲವೆಂದು ಹೇಳದೆ ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ, ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ; ಯಾರೂ ಅದನ್ನು ಮುಚ್ಚಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ಕಾಯ್ ಕರ್ತೆ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಕಾ ಉಲ್ಲೊ ಬಳ್ ಕಮಿ ಹಾಯ್, ತುಮಿ ಮಿಯಾ ಶಿಕ್ವಲ್ಲ್ಯಾ ಗೊಸ್ಟಿಯಾಂಚ್ಯಾ ಸರ್ಕೆ ಚಲುನ್; ಮಾಜಿ ಗೊಸ್ಟಿಯಾ ತಿರಸ್ಕಾರ್ ಕರುಕ್‍ನ್ಯಾಶಿ ಮಾಕಾ ವಿಶ್ವಾಸಾನ್ ರ್‍ಹಾಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಮಿಯಾ ತುಮ್ಚ್ಯಾಸಾಟ್ನಿ ಎಕ್ ದಾರ್ ಉಗ್ಡುನ್ ಥವ್ಲಾ ತೆ ಕೊನಾಚ್ಯಾನ್‍ಬಿ ಧಾಪುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:8
25 ತಿಳಿವುಗಳ ಹೋಲಿಕೆ  

ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.


“ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!


‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕಪಟಿಗಳಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು