ಪ್ರಕಟನೆ 4:1 - ಪರಿಶುದ್ದ ಬೈಬಲ್1 ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅತ್ತಾ ಅನಿ ಎಕ್ ದರ್ಶನ್ ಮಾಕಾ ಹೊಲೆ, ಸರ್ಗಾರ್ ಎಕ್ ದಾರ್ ಉಗಡಲ್ಲೆ ಮಿಯಾ ಬಗಟ್ಲೊ. ಅನಿ ಅದ್ದಿ ಆಯ್ಕಲ್ಲ್ಯಾ ಪಂವ್ಯಾಚ್ಯಾ ಅವಾಜಾ ಸಾರ್ಕೆ ಆಯ್ಕೊ ಯೆಲ್ಲೊ ಧನ್ ಮಾಕಾ ಆಯ್ಕೊ ಯೆಲೊ. ತ್ಯಾ ಧನಾನ್,“ತಿಯಾ ವರ್ತಿ ಚೆಡುನ್ ಯೆ, ಹೆಚ್ಯಾ ಮಾನಾ ಕಾಯ್ -ಕಾಯ್ ಹೊವ್ಕ್ ಪಾಜೆ ಮನುನ್ ಮಿಯಾ ತುಕಾ ದಾಕ್ವುನ್ ದಿತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.