Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:10 - ಪರಿಶುದ್ದ ಬೈಬಲ್‌

10 ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10-11 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಇಸಾರ್-ಚಾರ್ ಸಿವಾಸನಾಂಚ್ಯಾ ವರ್ತಿ ಬಸಲ್ಲಿ ಜಾನ್ತಿ ಲೊಕಾ ತ್ಯಾ ಸಿವಾಸನಾರ್ ಬಸಲ್ಲ್ಯಾಚ್ಯಾ ಇದ್ರಾಕ್ ಡಬ್ ಪಡಿತ್ ಅನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾಚೆ ಆರಾದನ್ ಕರಿತ್. ತೆನಿ ತ್ಯಾ ಸಿವಾಸನಾಚ್ಯಾ ಇದ್ರಾಕ್ ಅಪ್ನಾಚಿ ಮುಕುಟ್ ಕಾಡುನ್ ಥೈತ್ ಅನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:10
28 ತಿಳಿವುಗಳ ಹೋಲಿಕೆ  

ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು.


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.


ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು