ಪ್ರಕಟನೆ 4:11 - ಪರಿಶುದ್ದ ಬೈಬಲ್11 “ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 “ಅಮ್ಚ್ಯಾ ಸರ್ವೆಸ್ವರಾ ಅನಿ ಅಮ್ಚ್ಯಾ ದೆವಾ! ಮಾನ್, ಮಹಿಮಾ, ಅನಿ ಪದ್ವಿ ಸಗ್ಳಿ ತುಜಿಚ್ ಹೊವ್ಕ್ ಪಾಜೆ. ತಿಯಾಚ್ ಸಗ್ಳೆ ರಚ್ಲೆಯ್, ಅನಿ ತಿಯಾ ಮನ್ ಕರಲ್ಲ್ಯಾಸಾಟಿ ಸಗ್ಳೆ ರಚನ್ ಹೊಲಾ ಅನಿ ತೆಕಾ ಜಿವ್ ಹಾಯ್”. ಮನುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.