ಪ್ರಕಟನೆ 4:9 - ಪರಿಶುದ್ದ ಬೈಬಲ್9 ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಿ ಚಾರ್ ಸಾವ್ಜಾ ತ್ಯಾ ಸಿವಾಸನಾ ವರ್ತಿ ಬಸಲ್ಲ್ಯಾಕ್, ಗೌರವಾಚ್ಯಾ, ಮಹಿಮೆಚ್ಯಾ, ಧನ್ಯವಾದ್ ದಿತಲ್ಯಾ ಗಿತಾ ಗಾವಿತ್. ತೊ ಸದಾ ಸರ್ವತಾಕ್ ತೊ ಝಿತ್ತೊ ರ್‍ಹಾತಾ ಮನುನ್ ತೆನಿ ಗಿತ್ ಮನ್ತಾನಾ, ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”