Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:1 - ಪರಿಶುದ್ದ ಬೈಬಲ್‌

1 ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾಚ್ಯಾ ಉಜ್ವ್ಯಾ ಹಾತಿತ್ ಮಾಕಾ ಎಕ್ ಸುಳ್ಳಿ ದಿಸ್ಲಿ, ತ್ಯೆಚ್ಯಾ ವರ್ತಿ ದೊನ್ ಬಾಜುನಿಬಿ ಲಿವಲ್ಲೆ ಹೊತ್ತೆ. ಅನಿ ತಿ ಸುಳ್ಳಿ ಸಾತ್ ಛಪ್ಪೆ ಮಾರುನ್ ಘಟ್ ಭಾಂದಲ್ಲಿ ಹೊತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:1
16 ತಿಳಿವುಗಳ ಹೋಲಿಕೆ  

ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು.


ಆ ಕುರಿಮರಿಯು ಬಂದು ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಿಂದ ಸುರುಳಿಯನ್ನು ತೆಗೆದುಕೊಂಡಿತು.


ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು,


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”


ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.


ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.


“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.


ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.


ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.


ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.


ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;


ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು