Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:13 - ಪರಿಶುದ್ದ ಬೈಬಲ್‌

13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸರ್ಗಾ ವೈಲಿ ಜನಾವರಾ, ಜಿಮ್ನಿ ವೈಲಿ ಜನಾವರಾ, ಅನಿ ಜಿಮ್ನಿಚ್ಯಾ ಖಾಯ್ಲಿ ಅನಿ ಸಮುಂದರಾತ್ಲಿ ಜನಾವರಾ ಅನಿ ಹ್ಯಾ ಜಗಾತ್ ರಚಲ್ಲೆ ಸಗ್ಳೆ ಗಿತ್ ಗಾವ್ತಲೆ ಮಿಯಾ ಆಯಿಕ್ಲೊ. ಸಿವಾಸನಾ ವರ್ತಿ ಬಸಲ್ಲ್ಯಾಕ್ ಅನಿ ಬೊಕ್ಡಾಕ್ ಸುತ್ತಿ, ಅನಿ ಮಾನ್, ಮಹಿಮಾ ಅನಿ ಪದ್ವಿ ಸದಾ ಸರ್ವತಾಕ್!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:13
29 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ


ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ಸರ್ವಾಧಿಪತ್ಯವು ಎಂದೆಂದಿಗೂ ಆತನದೇ. ಆಮೆನ್.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ಒಬ್ಬನೇ ಜ್ಞಾನಿಯಾದ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.


ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು