ಪ್ರಕಟನೆ 5:9 - ಪರಿಶುದ್ದ ಬೈಬಲ್9 ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ . ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.