ಪ್ರಕಟನೆ 6:10 - ಪರಿಶುದ್ದ ಬೈಬಲ್10 ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆನಿ,“ಸಗ್ಳ್ಯಾಚ್ಯಾನ್ಕಿ ಮೊಟ್ಯಾ ದೆವಾ, ತಿಯಾ ಪವಿತ್ರ್ ಅನಿ ಖರೊ! ಅಮ್ಕಾ ಜಿವಾನಿ ಮಾರಲ್ಲ್ಯಾ ಹ್ಯಾ ಲೊಕಾಂಚಿ ನ್ಯಾಯ್ ನಿರ್‍ನಯ್ ನಿತ್ ಕರಿನಸ್ತಾನಾ ಅನಿ ತೆಂಕಾ ಶಿಕ್ಷಾ ದಿ ನಸ್ತಾನಾ ಅನಿ ಕವ್ಡೆ ಪತರ್ ರ್‍ಹಾತೆಯ್?” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.