Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:4 - ಪರಿಶುದ್ದ ಬೈಬಲ್‌

4 ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಕೆಂಪು ಕುದುರೆ ಒಂದು ಹೊರಟುಬಂದಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ವಿಶ್ವದಲ್ಲಿ ಶಾಂತಿಯನ್ನು ಅಳಿಸಿಹಾಕಿ ಲೋಕದ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡುವ ಅಧಿಕಾರವನ್ನು ಅವನಿಗೆ ಕೊಡಲಾಗಿತ್ತು. ಇದಲ್ಲದೆ, ಅವನಿಗೆ ದೊಡ್ಡ ಖಡ್ಗವನ್ನೂ ಸಹ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಮತ್ತೊಂದು ಕುದುರೆಯು ಹೊರಟು ಬಂತು; ಅದು ಕೆಂಪು ಕುದುರೆ. ಅದರ ಮೇಲೆ ಕೂತಿದ್ದವನಿಗೆ ಭೂವಿುಯಿಂದ ಸಮಾಧಾನವನ್ನು ತೆಗೆದುಬಿಡುವದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗುವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಅವನಿಗೆ ದೊಡ್ಡ ಕತ್ತಿಯು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಎಕ್ ಘೊಡ್ಕೆ ಭಾಯ್ರ್ ಯೆಲೆ ತೆಚೊ ರಂಗ್ ತಾಂಬ್ಡೊ ಹೊತ್ತೊ. ಹೆಚೆ ವರ್ತಿ ಸವಾರಿ ಕರ್ತಲ್ಯಾಕ್ ಜಿಮ್ನಿ ವರ್ತಿ ಝಗ್ಡೊ ಉಟ್ವುತಲೊ ಅಧಿಕಾರ್ ದಿಲ್ಲೊ ಹಾಯ್. ಹೆಚ್ಯಾ ವೈನಾ ಲೊಕಾ ಎಕಾಮೆಕಾಕ್ ಜಿವಾನಿ ಮಾರುನ್ ಘೆತಾತ್ ತೆಕಾ ಎಕ್ ಮೊಟಿ ತಲ್ವಾರ್ ದಿಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:4
17 ತಿಳಿವುಗಳ ಹೋಲಿಕೆ  

ಮೊದಲನೇ ರಥವನ್ನು ಕೆಂಪು ಕುದುರೆಗಳು ಎಳೆಯುತ್ತಿದ್ದವು. ಎರಡನೇ ರಥವನ್ನು ಕಪ್ಪು ಕುದುರೆಗಳು ಎಳೆಯುತ್ತಿದ್ದವು.


“ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ರಾತ್ರಿವೇಳೆಯಲ್ಲಿ ಒಬ್ಬ ಮನುಷ್ಯನು ಕೆಂಪು ಬಣ್ಣದ ಕುದುರೆಯ ಮೇಲೆ ಸವಾರಿ ಮಾಡುವದನ್ನು ಕಂಡೆನು. ಅವನು ಕಣಿವೆಯ ಸುಗಂಧ ಮರಗಳ ಬಳಿ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಮತ್ತು ಬಿಳಿ ಕುದುರೆಗಳು ನಿಂತಿದ್ದವು.


ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು