9 ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.
9 ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.
ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.
ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)
ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.
ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.
ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.
ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.