ಪ್ರಕಟನೆ 7:12 - ಪರಿಶುದ್ದ ಬೈಬಲ್12 ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 “ಆಮೆನ್! ಸುತ್ತಿ, ಮಹಿಮಾ, ಜ್ಞಾನ್, ಧನ್ಯವಾದ್, ಮಾನ್, ಬಳ್, ಅನಿ ಪರಾಕ್ರಮ್ ಸದಾ ಸರ್ವತಾಕ್ ಅಮ್ಚ್ಯಾ ದೆವಾಚೆಚ್ ಹೊಂವ್ದಿತ್! ಆಮೆನ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.