Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:14 - ಪರಿಶುದ್ದ ಬೈಬಲ್‌

14 “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಮಿಯಾ,“ಸಾಯ್ಬಾ ಮಾಕಾ ಗೊತ್ತ್ ನಾ, ತುಕಾಚ್ ತೆ ಗೊತ್ತ್ ಹಾಯ್.” ಮನುನ್ ಜಬಾಬ್ ದಿಲೊ. ತೆನಿ ಮಾಕಾ,“ಮೊಟ್ಯಾ ತರಾಸಾತ್ನಾ ಸುರಕ್ಷಿತ್ ಪಾರ್ ಹೊವ್ನ್ ಯೆಲ್ಲಿ ಲೊಕಾ ಹಿ. ತೆನಿ ಅಪ್ನಾಚೆ ಝಗೆ ಬೊಕ್ಡಾಚ್ಯಾ ರಗ್ತಾನ್ ಧುವ್ನ್ ಫಾಂಡ್ರೆ ಕರುನ್ ಘೆಟ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:14
30 ತಿಳಿವುಗಳ ಹೋಲಿಕೆ  

ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಅವನು ಚಿನ್ನದ ನಾಲ್ಕು ಬಳೆಗಳನ್ನು ಮಾಡಿಸಿ ಪೆಟ್ಟಿಗೆಯ ನಾಲ್ಕು ಮೂಲೆಗಳಲ್ಲಿ ಇರಿಸಿದನು. ಈ ಬಳೆಗಳು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸಲ್ಪಡುತ್ತಿದ್ದವು. ಪ್ರತಿಯೊಂದು ಬದಿಯಲ್ಲೂ ಎರಡು ಬಳೆಗಳಿದ್ದವು.


ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.


ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಯೋಬನೇ, ಆಗ ನೀನು ನಿನ್ನ ಕಷ್ಟವನ್ನು ಮರೆತುಬಿಡುವೆ; ಹರಿದುಹೋದ ನೀರನ್ನೋ ಎಂಬಂತೆ ನಿನ್ನ ಕಷ್ಟಗಳನ್ನು ಜ್ಞಾಪಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು