ಪ್ರಕಟನೆ 7:15 - ಪರಿಶುದ್ದ ಬೈಬಲ್15 ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಚೆಸಾಟ್ನಿ ತೆನಿ ದಿಸ್ ರಾತ್ ದೆವಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ತ್ಯೆಚ್ಯಾ ಗುಡಿತ್ ತೆಚೆ ಆರಾದನ್ ಕರ್‍ತ್ಯಾತ್. ಸಿವಾಸನಾ ವರ್ತಿ ಬಸಲ್ಲೊ ಅಪ್ನಿ ತೆಂಚ್ಯಾ ಮದ್ದಿ ಹಾಜರ್ ಹೊಲ್ಲ್ಯಾ ವೈನಾ ತೆಂಚಿ ರಾಕನ್ ಕರ್ತಾ. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”