ಪ್ರಕಟನೆ 7:16 - ಪರಿಶುದ್ದ ಬೈಬಲ್16 ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಫಿಡೆ ಕನ್ನಾಬಿ ತೆಂಕಾ ಭುಕ್ ಹೊಂವ್ದಿತ್ ಸೊಸ್ ಹೊಂವ್ದಿತ್ ಲಾಗಿನಾ; ನಿಂಬಾರ್ ಹೊಂವ್ದಿತ್ ಅನಿ ಕಸ್ಲೊಬಿ ಝಳ್ ಹೊಂವ್ದಿತ್ ತೆಂಕಾ ಲಾಗಿನಾ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.