ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನ ಸಂದೇಶವಿದು: “ಯೆಹೂದದ ಜನರು ಕಹಿಯಾದ ಆಹಾರವನ್ನು ತಿನ್ನುವಂತೆ ನಾನು ಬೇಗನೆ ಮಾಡುವೆನು; ಅವರು ವಿಷಮಿಶ್ರಿತ ನೀರನ್ನು ಕುಡಿಯುವಂತೆ ಮಾಡುವೆನು.
ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.
ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.
ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.
ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.
ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.
ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ “ಮಾರಾ” ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.
ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.