Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:3 - ಪರಿಶುದ್ದ ಬೈಬಲ್‌

3 ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್‍ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:3
32 ತಿಳಿವುಗಳ ಹೋಲಿಕೆ  

ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.


ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.


“ಅವರು ಚಿನ್ನದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಶ್ರೇಷ್ಠ ತೊಗಲಿಂದ ಅದನ್ನು ಮುಚ್ಚಬೇಕು. ಬಳಿಕ ಅವರು ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಿಗೆ ಸೇರಿಸಬೇಕು.


ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು.


ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.


ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.


ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು