Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:4 - ಪರಿಶುದ್ದ ಬೈಬಲ್‌

4 ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಧೂಪದ ಹೊಗೆಯು ದೇವದೂತನ ಕೈಯೊಳಗಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವಾಚ್ಯಾ ದುತಾಚ್ಯಾ ಹಾತಾತ್ನಾ ಧುಪಾಚೊ ಡುಕೊಟ್ ದೆವಾಚ್ಯಾ ಲೊಕಾಚ್ಯಾ ಮಾಗ್ನಿಯಾಂಚ್ಯಾ ವಾಂಗ್ಡಾ ದೆವಾಕ್ಡೆ ವೈರ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:4
7 ತಿಳಿವುಗಳ ಹೋಲಿಕೆ  

ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.


ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು