ಪ್ರಕಟನೆ 8:5 - ಪರಿಶುದ್ದ ಬೈಬಲ್5 ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ದೆವಾಚ್ಯಾ ದುತಾನ್ ಇಂಗ್ಳೆ ಭರಲ್ಲೆ ತೆ ಧುಪಾಚೆ ಆಯ್ದಾನ್ ಆಲ್ತಾರಿ ವೈನಾ ಘೆಟ್ಲ್ಯಾನ್ ಅನಿ ಜಿಮ್ನಿ ವರ್ತಿ ನ್ಹೆವ್ನ್ ವೊತ್ಲ್ಯಾನ್. ತನ್ನಾ ಮೊಟೊ ಗುಡ್ಗುಡೊ, ಮೊಟ್ಯಾ ಗಜ್ನಿಯಾಂಚೊ ಆವಾಜ್ ಯೆಲೊ,ಲಕ್‍ಲಕ್ಲೆ ಅನಿ ಭುಕಂಪ್ ಹೊಲೊ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.