ಪ್ರಕಟನೆ 9:1 - ಪರಿಶುದ್ದ ಬೈಬಲ್1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನಾ ಪಾಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ತನ್ನಾ ಎಕ್ ಚಿಕ್ಕಿ ಮಳ್ಬಾ ವೈನಾ ಜಿಮ್ನಿ ವರ್ತಿ ಪಡ್ತಲೆ ಮಿಯಾ ಬಗಟ್ಲೊ, ತೆಚೆಕ್ಡೆ ಪಾತಾಳಾಚಿ ಚಾವಿ ದಿಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.