Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:10 - ಪರಿಶುದ್ದ ಬೈಬಲ್‌

10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಇಂಚ್ವಾಕ್ ಹೊತ್ತ್ಯಾ ಸರ್ಕೆ ಲೆಂಗೆ ಅನಿ ಸೆಪ್ಡಿಯಾ ತೆಂಕಾ ಹೊತ್ತ್ಯಾ, ಅನಿ ತೆಂಚ್ಯಾ ಸೆಪ್ಡಿಯಾತ್ನಿ ಲೊಕಾಕ್ನಿ ಪಾಚ್ ಮ್ಹಯಿನೆ ತರಾಸ್ ದಿತಲೊ ಬಳ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:10
7 ತಿಳಿವುಗಳ ಹೋಲಿಕೆ  

ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.


ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.


ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.


ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.


ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.


“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.


ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು