ಪ್ರಕಟನೆ 9:11 - ಪರಿಶುದ್ದ ಬೈಬಲ್11 ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಪಾತಾಳಾ ವರ್ತಿ ಅದಿಕಾರ್ ಹೊತ್ತೊ ದೆವ್‍ದುತಾ ತೆಂಚೊ ಮೊಟೊ ಮುಖಂಡ್ ಹೊವ್ನ್ ಹೊತ್ತೊ. ಹೆಬ್ರೆವ್ ಬಾಸೆತ್ ತೆಚೆ ನಾಂವ್ ಅಬಾಡ್ಡನ್; ಗ್ರಿಕ್ ಬಾಸೆತ್ ತೆಚೆ ನಾಂವ್ ಅಪೊಲಿನ್. ಹೆಚೊ ಅರ್ತ್ ನಾಸ್ ಕರ್‍ತಲೊ. ಅಧ್ಯಾಯವನ್ನು ನೋಡಿ |