Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:13 - ಪರಿಶುದ್ದ ಬೈಬಲ್‌

13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆರನೆಯ ದೇವದೂತನು ತುತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದೇ ಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ದೆವಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿಚ್ಯಾ ಚಾರಿ ಬಾಜುನ್ ಎಕ್ ಧನ್ ಮಿಯಾ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:13
7 ತಿಳಿವುಗಳ ಹೋಲಿಕೆ  

ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು.


ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು