20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.
ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.
ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.
ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು.
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.
“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.
ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.
ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.
ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.’
ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’
ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.
ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”
ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.