ಪ್ರಕಟನೆ 9:21 - ಪರಿಶುದ್ದ ಬೈಬಲ್21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆನಿ ಲೊಕಾಕ್ನಿ ಜಿವಾನಿ ಮಾರ್‍ತಲ್ಯಾತ್ನಾ ಹೊಂವ್ದಿ, ಜಾದು ಕರ್‍ತಲ್ಯಾತ್ನಾ ಹೊಂವ್ದಿತ್, ತೆಂಚ್ಯಾ ಬುರ್ಶ್ಯಾ ಆಂಗಾಚ್ಯಾ ಸಮಂದಾತ್ನಾ ಹೊಂವ್ದಿ, ನಾಹೊಲ್ಯಾರ್ ಚೊರ್ತಲ್ಯಾತ್ನಾ ಮನ್ ಬದ್ಲುಕ್ ನತ್ತ್ಯಾನಿ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.