Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:1 - ಪರಿಶುದ್ದ ಬೈಬಲ್‌

1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:1
38 ತಿಳಿವುಗಳ ಹೋಲಿಕೆ  

ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.


ಯೆಹೋಯಾಕೀಮನು ಫರೋಹ ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.


ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.


ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.


ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”


ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.


ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.


ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.


“ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು