ಪ್ರಲಾಪಗಳು 1:10 - ಪರಿಶುದ್ದ ಬೈಬಲ್10 ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ. ಅಧ್ಯಾಯವನ್ನು ನೋಡಿ |
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.