Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:12 - ಪರಿಶುದ್ದ ಬೈಬಲ್‌

12 ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:12
18 ತಿಳಿವುಗಳ ಹೋಲಿಕೆ  

“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ನನ್ನ ಕೋಪದಿಂದ ಆಕಾಶಮಂಡಲವನ್ನು ನಡುಗಿಸುವೆನು. ಭೂಮಿಯನ್ನು ಅದರ ಸ್ಥಳದಿಂದ ಕದಲಿಸುವೆನು.” ಸರ್ವಶಕ್ತನಾದ ಯೆಹೋವನು ತನ್ನ ಮಹಾಕೋಪವನ್ನು ಪ್ರದರ್ಶಿಸುವ ದಿನದಲ್ಲಿ ಅದು ನೆರವೇರುವುದು.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಯೆಹೋವನು ಬಹಳ ಕೋಪ ತಾಳಿದ್ದನು. ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು.


“ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು