Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:19 - ಪರಿಶುದ್ದ ಬೈಬಲ್‌

19 ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:19
15 ತಿಳಿವುಗಳ ಹೋಲಿಕೆ  

ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.


ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.


ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು