Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:2 - ಪರಿಶುದ್ದ ಬೈಬಲ್‌

2 ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:2
30 ತಿಳಿವುಗಳ ಹೋಲಿಕೆ  

ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.


ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.


ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.


ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲೆತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿಯಾಗಿ ನೋಡುವರು.


ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.


ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ ನನಗೆ ನೇಮಿಸಲಾಗಿದೆ.


ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.


ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು