ಪ್ರಲಾಪಗಳು 1:21 - ಪರಿಶುದ್ದ ಬೈಬಲ್21 “ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು. ಅಧ್ಯಾಯವನ್ನು ನೋಡಿ |
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”