ಪ್ರಲಾಪಗಳು 1:22 - ಪರಿಶುದ್ದ ಬೈಬಲ್22 “ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ. ಅಧ್ಯಾಯವನ್ನು ನೋಡಿ |
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”